ಶಿರಸಿ:ಶನಿವಾರ ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಭೇಟಿಯಾಗಿ ಉತ್ತರ ಕನ್ನಡದ ಕೈಗಾ ಅಣು ವಿದ್ಯುತ್ ಸ್ಥಾವರದ ದುಷ್ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಕೈಗಾ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಿದ ನಂತರದಲ್ಲಿ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಲ್ಲಿ ಕ್ಯಾನ್ಸರ್ ಸೇರಿ ನಾನಾ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಅದರ ಬಗ್ಗೆ ಕೇಂದ್ರ ಸರ್ಕಾರ ಸಮಗ್ರ ಸಮೀಕ್ಷಾ ನಡೆಸಬೇಕು. ಮತ್ತು ಇದೇ ಕಾರಣದಿಂದ ಕೈಗಾ ಅಣು ಸ್ಥಾವರದ ಉದ್ದೇಶಿತ ಐದು-ಆರನೇ ಘಟಕಗಳ ವಿಸ್ತರಣೆಯನ್ನು ಕೈಬಿಡಬೇಕು ಎಂಬುದಾಗಿ ಸ್ವರ್ಣವಲ್ಲಿ ಶ್ರೀಗಳು ಗೃಹಮಂತ್ರಿ ಶಾ ಅವರಲ್ಲಿ ಮನವಿ ಮಾಡಿಕೊಂಡರು.