ಕಾರವಾರ:ಶ್ರೀ ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಹಾಗೂ ಅವರ ಪತ್ನಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಗೋಕರ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅನಿಲ್ ಕುಂಬ್ಳೆ ದಂಪತಿ - news kannada
ಸದ್ಯ ಐಪಿಎಲ್ ಟೂರ್ನಿಲ್ಲಿ ಬ್ಯುಸಿಯಾಗಿರಬೇಕಿದ್ದ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಕ್ರಿಕೆಟಿಗ ಅನಿಲ್ ಕುಂಬ್ಳೆ ಹಾಗೂ ಅವರ ಪತ್ನಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸುತ್ತಿರುವುದು
ಪತ್ನಿಯೊಂದಿಗೆ ಆಗಮಿಸಿದ ಅನೀಲ್ ಕುಂಬ್ಳೆ ಮಹಾಬಲೇಶ್ವರ ದೇವರ ದರ್ಶನ ಪಡೆದು ಬಳಿಕ ಆತ್ಮ ಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು.
ಬಳಿಕ ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಜೆ.ಕೆ.ಹೆಗಡೆ, ಕುಂಬ್ಳೆ ದಂಪತಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ವೇ. ವಿಶ್ವನಾಥ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಜಿ.ಪಂ. ಸದಸ್ಯ ಪ್ರದೀಪ ನಾಯಕ, ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು.