ಶಿರಸಿ: ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ ಎಂದು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯನ್ನು ಫೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ ಘಟನೆ ತಾಲೂಕಿನ ಬನವಾಸಿಯಲ್ಲಿ ನಡೆದಿದೆ.
ಪುಸಲಾಯಿಸಿ ಅಪ್ರಾಪ್ತ ಬಾಲಕಿ ಜೊತೆ ದೈಹಿಕ ಸಂಪರ್ಕ: ಆರೋಪಿ ಅರೆಸ್ಟ್ - ಶಿರಸಿ ಆರೋಪಿಯ ಬಂಧನ
ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಬನವಾಸಿಯಲ್ಲಿ ನಡೆದಿದೆ.
ಆರೋಪಿ
ಕೊರ್ಲಕಟ್ಟಾದ ದೀಪಲ ಫಕೀರಪ್ಪ ಚಲುವಾದಿ ಬಂಧಿತ ಆರೋಪಿಯಾಗಿದ್ದಾನೆ. ಈತ ಆ.8 ರಂದು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ದೇವಸ್ಥಾನಕ್ಕೆ ಹೋಗಿ ಬರೋಣ ಎಂದು ಕರೆದೊಯ್ದು ಸಮೀಪದ ಅರಣ್ಯ ಪ್ರದೇಶದಲ್ಲಿ ಬಲವಂತವಾಗಿ ದೈಹಿಕ ಸಂಭೋಗ ಮಾಡಿದ್ದಾಗಿ ಬಾಲಕಿ ದೂರಿದ್ದಾಳೆ.
ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಐಪಿಸಿ ಕಲಂ 376 ಹಾಗೂ 4 ಪೋಕ್ಸೋ 2012 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.