ಕರ್ನಾಟಕ

karnataka

ETV Bharat / state

ಅಕ್ರಮ ಗಾಂಜಾ ಮಾರಾಟಗಾರನ ಬಂಧನ... 5 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಗಾಂಜಾ ವಶ - 5 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಗಾಂಜಾ ವಶ

ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೊಬ್ಬ ನಗರದ ಪೊಲೀಸರು ಬಂಧಿಸಿ ಆತನಿಂದ 5 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಧಾರವಾಡ ಕರ್ನಾಟಕ ಸ್ನಾತಕೋತ್ತರ ಕೇಂದ್ರದ ಬಳಿ ಇಂದು ನಡೆದಿದೆ.

the arrest of an illegal marijuana dealer in karavara
ಅಕ್ರಮ ಗಾಂಜಾ ಮಾರಾಟಗಾರನ ಬಂಧನ..5 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಗಾಂಜಾ ವಶ...

By

Published : Jan 6, 2020, 7:29 AM IST

ಕಾರವಾರ:ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೊಬ್ಬ ನಗರದ ಪೊಲೀಸರು ಬಂಧಿಸಿ ಆತನಿಂದ 5 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಧಾರವಾಡ ಕರ್ನಾಟಕ ಸ್ನಾತಕೋತ್ತರ ಕೇಂದ್ರದ ಬಳಿ ಇಂದು ನಡೆದಿದೆ.

ಆರೋಪಿ ನಾಗರಾಜ ಮಲ್ಲಿಕಾರ್ಜುನ ಹಡಪದ (20) ಮೂಲತ ಸದಾಶಿಗಡದವನ್ನಾಗಿದ್ದು, ಈತ ಕಳೆದ ಕೆಲವು ದಿನಗಳಿಂದ ಗೋವಾ ಮೂಲಕ ಗಾಂಜಾ ತಂದು ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ನಗರದ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಶೆಟ್ಟಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಗಾಂಜಾ ಸಮೇತ ಬಂಧಿಸಲು ಯಶಸ್ವಿಯಾಗಿದ್ದಾರೆ.

ಬಳಿಕ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದಿಂದ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಲಾಗಿದೆ. ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ನಗರಕ್ಕೆ ಅವ್ಯಾಹತವಾಗಿ ಪೂರೈಕೆಯಾಗುತ್ತಿದ್ದ ಗಾಂಜಾ ಮೂಲವನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details