ಕರ್ನಾಟಕ

karnataka

ETV Bharat / state

ಕಾರವಾರ: ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್.. ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ - ಈಟಿವಿ ಭಾರತ ಕನ್ನಡ

ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲ್ಲಾಪುರದ ಬಳಿ ನಡೆದಿದೆ.

ಖಾಸಗಿ ಬಸ್ ಪಲ್ಟಿ
ಖಾಸಗಿ ಬಸ್ ಪಲ್ಟಿ

By

Published : Jul 22, 2023, 11:37 AM IST

ಕಾರವಾರ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯಲ್ಲಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆಯ ಮಿಲನ್ ಹೋಟೆಲ್ ಬಳಿ ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್​ ಊರುಳಿ ಬಿದ್ದಿದೆ.

ಅವಘಡದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಣ್ಣಪುಟ್ಟ ಗಾಯಾಳುಗಳಿಗೆ ಯಲ್ಲಾಪುರದ ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಆಪಘಾತಗೊಂಡ ಸ್ಥಳಕ್ಕೆ ಪೊಲೀಸ್ ನಿರೀಕ್ಷಕರಾದ ರಂಗನಾಥ್, ನೀಲಮ್ಮನವರ್ ಹಾಗೂ ಪಿಎಸ್‌ಐ ರವಿ ಗುಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ:Heavy rain: ಬೆಳಗಾವಿಯಲ್ಲಿ ಭಾರಿ ಮಳೆ .. ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿಗೆ ಗಾಯ

ABOUT THE AUTHOR

...view details