ಕಾರವಾರ: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ: ಕೊಲೆ ಶಂಕೆ - The corpse of a missing man was discovered
ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ
ಬೆಳವಟಗಿಯ ನಾಗರಾಜ ಕೊಳದಾರ (31) ಮೃತ ವ್ಯಕ್ತಿ. ಈತ ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ರುಂಡ ಮುಂಡ ಬೇರ್ಪಟ್ಟು, ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.