ಶಿರಸಿ(ಉತ್ತರ ಕನ್ನಡ): ಮಳೆಯಿಂದಾಗಿ ಮನೆ ಕಳೆದುಕೊಂಡಿದ್ದ ಕುಟುಂಬಗಳಿಗೆ ಸರ್ಕಾರ ಒಂದು ರೂಪಾಯಿಯ ಪರಿಹಾರ ನೀಡುವ ಮೂಲಕ ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಕಳೆದ ವರ್ಷ ಜುಲೈನಲ್ಲಿ ಉತ್ತರಕನ್ನಡ ಭಾಗದಲ್ಲಿ ಅತಿಯಾದ ಮಳೆಯಿಂದ ಪ್ರವಾಹ ಉಂಟಾಗಿ ಶಿರಸಿಯ ಜಾನ್ಮನೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ರೇವಣಕಟ್ಟ ಗ್ರಾಮದಲ್ಲಿ ಐವತ್ತಕ್ಕೂ ಹೆಚ್ಚು ಮನೆಗಳು ಪ್ರವಾಹಕ್ಕೆ ಸಂಪೂರ್ಣ ಹಾನಿಯಾಗಿದ್ದವು. ಹಾನಿಗೊಳಗಾದ ಮನೆಗಳಿಗೆ ಸರ್ಕಾರ ಪರಿಹಾರವನ್ನೂ ಘೋಷಿಸಿತ್ತು. ಆದರೇ, ಕೆಲವರಿಗೆ ಮಾತ್ರ ಮೊದಲ ಕಂತಿನ ಪರಿಹಾರದ ಹಣ ಬಿಡುಗಡೆಯಾದರೇ, ಇನ್ನುಳಿದ 12 ಮನೆಗಳಿಗೆ ಒಂದು ರುಪಾಯಿ ಪರಿಹಾರ ಮಾತ್ರ ಸಿಕ್ಕಿದೆ. ಕಳೆದ ಒಂದು ವರ್ಷದಿಂದ ಮನೆಯೂ ಇಲ್ಲ, ಪರಿಹಾರವೂ ಇಲ್ಲ ಎನ್ನುವ ಸ್ಥಿತಿಯಲ್ಲಿದ್ದ ಸಂತ್ರಸ್ತರು ಪರಿಹಾರಕ್ಕಾಗಿ ದಿನವೂ ಕಚೇರಿಗೆ ಅಲೆಯುವಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.