ಕರ್ನಾಟಕ

karnataka

By

Published : Feb 17, 2021, 9:56 AM IST

ETV Bharat / state

ರೈತ ವಿರೋಧಿ ಕಾನೂನುಗಳನ್ನು, ಹಿಂಪಡೆಯುವಂತೆ ಒತ್ತಾಯಿಸಿ ಪಂಜಿನ ಮೆರವಣಿಗೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ರೈತ ಸಂಘಟನೆಗಳು ಪಂಜಿನ ಮೆರವಣಿಗೆ ನಡೆಸಿವೆ.

torchlight march against new aggriculture laws
ರೈತರಿಂದ ಪಂಜಿನ ಮೆರವಣಿಗೆ

ಬಳ್ಳಾರಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಮೂರು ಕಾನೂನುಗಳನ್ನು ಹಿಂಪಡೆಯಬೇಕೆಂದು ಎಂದು ಕರೂರು ಗ್ರಾಮದಲ್ಲಿ ಪಂಜಿನ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿದರು.

ರೈತರಿಂದ ಪಂಜಿನ ಮೆರವಣಿಗೆ
ತಾಲೂಕಿನ ಹೆಚ್. ಹೊಸಳ್ಳಿ ಗ್ರಾಮದಿಂದ ಹಾಗಲೂರು, ದರೂರು ಗ್ರಾಮಗಳಲ್ಲಿ ರಾಜ್ಯ ರೈತ ಸಂಘ ಮತ್ತು ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳು ಪಂಜಿನ ಮೆರವಣಿಗೆ ನಡೆಸಿದ್ರು. ಈ ವೇಳೆ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಆರ್. ಮಾಧವರೆಡ್ಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ರೈತರಿಗೆ ಮಾರಕವಾಗುವ ಮೂರು ಕಾನೂನುಗಳನ್ನು ಜಾರಿಗೆ ತಂದಿವೆ. ಇವುಗಳಿಂದ ರೈತರು ತಮ್ಮ ಕೃಷಿ ಜಮೀನುಗಳನ್ನು ಕಳೆದುಕೊಂಡು ಬೀದಿಗೆ ಬೀಳಬೇಕಾಗುತ್ತದೆ. ಈ ಕಾನೂನುಗಳು ರೈತರ ಪಾಲಿಗೆ ಮರಣ ಶಾಸನವಾಗಿವೆ ಎಂದು ಕಿಡಿಕಾರಿದರು.
ಕಳೆದ ಮೂರು ತಿಂಗಳಿಂದ ಲಕ್ಷಾಂತರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ನೂರಾರು ರೈತರು ತಮ್ಮ ಪ್ರಾಣಾರ್ಪಣೆ ಮಾಡಿದ್ದಾರೆ. ಮುಂದೆ ಹಳ್ಳಿ-ಹಳ್ಳಿ ಗಳಲ್ಲಿಯೂ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದೆಂದರು. ಈ ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ವಾ.ಹುಲುಗಯ್ಯ, ಮುಖಂಡರಾದ ಕರಿಯಪ್ಪ ಗುಡಿಮನಿ, ಕೆ. ಯಲ್ಲನಗೌಡ ಕೃಷ್ಣಾರೆಡ್ಡಿ, ಕೇಶವರೆಡ್ಡಿ, ದ್ಯಾವಪ್ಪ, ಬಸವ ಮಲ್ಲಿಕಾರ್ಜುನ, ಮಂಜುನಾಥ, ರಾಮಾಂಜಿನಿ ರೆಡ್ಡಿ, ಗಂಗಾಧರ, ಸಣ್ಣ ತಿಮ್ಮಪ್ಪ ಮತ್ತು ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.

ABOUT THE AUTHOR

...view details