ಕಾರವಾರ: ಒಂದೆಡೆ ವಾಯುಭಾರ ಕುಸಿತದಿಂದಾಗಿ ಬೋಟುಗಳು ಮೀನುಗಾರಿಕೆಗೆ ತೆರಳದೇ ಬಂದರುಗಳಲ್ಲಿ ಲಂಗರು ಹಾಕಿ ನಿಂತಿದ್ದರೆ, ಇತ್ತ ಸಾಂಪ್ರದಾಯಿಕ ಏಂಡಿ ಬಲೆಗೆ ಮಾತ್ರ ರಾಶಿ ರಾಶಿ ಮೀನು ಬಿದ್ದಿದ್ದು, ಮೀನುಗಾರರ ಖುಷಿಗೆ ಕಾರಣವಾಗಿದೆ.
ಹೌದು, ಕಳೆದ ಎರಡು ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಅರಬ್ಬಿ ಸಮುದ್ರ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಗಾಳಿಯೂ ಹೆಚ್ಚಾಗಿ ಬೀಸುತ್ತಿರುವುದು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮಾಡಿದೆ. ಹೀಗಾಗಿ ಹವಾಮಾನ ಇಲಾಖೆ ಕೂಡ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಕೂಡ ಆಗಾಗ ಘೋಷಣೆ ಮಾಡುತ್ತಿದೆ. ಇದರ ಆಧಾರದ ಮೇಲೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಿದ್ದು, ಕಳೆದ ಹಲವು ದಿನಗಳಿಂದ ಮೀನುಗಾರರು ಕಡಲಿಗೆ ಇಳಿಯುತ್ತಿಲ್ಲ. ಹೀಗಾಗಿ ಮತ್ಸ್ಯ ಶಿಕಾರಿ ಸ್ವಲ್ಪ ಕಡಿಮೆ ಪ್ರಮಾಣದಲ್ಲಾಗಿತ್ತು.