ಕಾರವಾರ: ಉತ್ತರಕನ್ನಡ ಜಿಲ್ಲೆಯ ವಿವಿಧೆಡೆ ಸಂಜೆ ವೇಳೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ.
ಜಿಲ್ಲೆಯ ಕಾರವಾರ, ಕುಮಟಾ, ಹಳಿಯಾಳ, ಯಲ್ಲಾಪುರ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಸಂಜೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಹಳಿಯಾಳ ಪಟ್ಟಣದ ಶೆಟ್ಟಿಗೇರಿಯಲ್ಲಿ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು ಮರಗಳು ಹೊತ್ತಿ ಉರಿದಿವೆ.