ಕಾರವಾರ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹೆಬ್ಬುಳ ಬಳಿ ನಡೆದಿದೆ.
ಕಾರು,ಲಾರಿ ಅಪಘಾತದಲ್ಲಿ ಇಬ್ಬರ ಸಾವು: ಮತ್ತಿಬ್ಬರ ಸ್ಥಿತಿ ಗಂಭೀರ - ಉತ್ತರ ಕನ್ನಡ ಜಿಲ್ಲೆ
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೆಬ್ಬುಳ ಬಳಿ ಕಾರು ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಹಾಗೂ ಲಾರಿ ಅಪಘಾತದಲ್ಲಿ ಇಬ್ಬರು ಮೃತ
ಕಾರವಾರ ಮೂಲದ ಚಂದ್ರಮೌಳಿ(55) ಹಾಗೂ ರಾಘವೇಂದ್ರ (25) ಎಂಬುವವರು ಮೃತ ದುರ್ದೈವಿಗಳು. ಬೆಂಗಳೂರಿನಿಂದ ಕಾರವಾರಕ್ಕೆ ಆಗಮಿಸುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದ್ದು, ಕಾರಿನ ಮುಂಬದಿ ಕುಳಿತಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಿಂಬದಿ ಕುಳಿತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.