ಕಾರವಾರ :ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಗ್ರಾಮದ ಬಳಿ ನಡೆದಿದೆ.
ಬೈಕ್, ಲಾರಿ ಮುಖಾಮುಖಿ.. ಇಬ್ಬರು ಸವಾರರು ಸಾವು.. - ಅಪಘಾತ ಸುದ್ದಿ
ಘಟನೆಯಲ್ಲಿ ಓರ್ವನ ತಲೆ ಒಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಇನ್ನೋರ್ವ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.
ಬೈಕ್ ಲಾರಿ ಮುಖಾಮುಖಿ
ತಾಲೂಕಿನ ಬಡಗೇರಿ ಗ್ರಾಮದ ನಾಗರಾಜ್ ಲಕ್ಷ್ಮಣಗೌಡ (30) ಹಾಗೂ ಬಾಳಾ ಮಾನುಗೌಡ (26) ಎಂಬುವರು ಮೃತರು ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ಅಂಕೋಲಾದಿಂದ ಯಲ್ಲಾಪುರ ಕಡೆ ತೆರಳುವಾಗ ಅಪರಿಚಿತ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವನ ತಲೆ ಒಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಇನ್ನೋರ್ವ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.
ಅಪಘಾತದ ನಂತರ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.