ಕಾರವಾರ:ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿ ತಡರಾತ್ರಿ ನಡೆದಿದೆ.
ಕಾರವಾರ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ; ಸವಾರರಿಬ್ಬರ ದುರ್ಮರಣ! - ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ
ನಿನ್ನೆ ತಡರಾತ್ರಿ ಬೈಕ್ನಲ್ಲಿ ಅಂಕೋಲಾದಿಂದ ಕಾರವಾರದ ಕಡೆ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ಗುದ್ದಿ ಪರಾರಿಯಾಗಿದೆ. ಈ ವೇಳೆ, ಭಾರೀ ಮಳೆ ಸುರಿಯುತ್ತಿದ್ದ ಕಾರಣ ಘಟನೆ ತಡವಾಗಿ ಗಮನಕ್ಕೆ ಬಂದಿದೆ.
ದುರ್ಮರಣ
ಕಾರವಾರದ ಕೆ.ಎಚ್.ಬಿ ಕಾಲೊನಿ ನಿವಾಸಿಗಳಾದ ಶಶಿ ಬಸಪ್ಪ (20), ಗುಂಡಪ್ಪ (25) ಮೃತಪಟ್ಟ ದುರ್ದೈವಿಗಳು. ನಿನ್ನೆ ತಡರಾತ್ರಿ ಬೈಕ್ನಲ್ಲಿ ಅಂಕೋಲಾದಿಂದ ಕಾರವಾರದ ಕಡೆ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ಗುದ್ದಿ ಪರಾರಿಯಾಗಿದೆ. ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ಕಾರಣ ಘಟನೆ ತಡವಾಗಿ ಗಮನಕ್ಕೆ ಬಂದಿದ್ದು, ಅಷ್ಟರಲ್ಲಾಗಲೇ ಇಬ್ಬರು ಮೃತಪಟ್ಟಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಅಪರಿಚಿತ ವಾಹನಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.