ಕಾರವಾರ: ಎರಡು ಪ್ರತ್ಯೇಕ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರರಿಬ್ಬರು ಸಾವಿಗೀಡಾದ ಘಟನೆ ಕಾರವಾರ ಹಾಗೂ ಹೊನ್ನಾವರದಲ್ಲಿ ನಡೆದಿದೆ.
ಪ್ರತ್ಯೇಕ ಅಪಘಾತದಲ್ಲಿ ಬೈಕ್ ಸವಾರರಿಬ್ಬರ ದುರ್ಮರಣ - ಕಾರವಾರ
ಕಾರವಾರದ ಮುದುಗಾ ಬಳಿಯ ಘಟ್ಟ ಪ್ರದೇಶದಲ್ಲಿ ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕುಮಟಾ ಮೂಲದ ದಿಪೇಶ (23) ಸಾವನ್ನಪ್ಪಿದ್ದಾನೆ. ಹಾಗೆ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಭಟ್ಕಳ ತಾಲೂಕಿನ ಶಿರಾಲಿ ಮೂಲದ ಪ್ರಕಾಶ ನಾಗಪ್ಪ ಶೆಟ್ಟಿ (50) ಮೃತ ದುರ್ದೈವಿ.
ಕಾರವಾರದ ಮುದುಗಾ ಬಳಿಯ ಘಟ್ಟ ಪ್ರದೇಶದಲ್ಲಿ ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕುಮಟಾ ಮೂಲದ ದಿಪೇಶ (23) ಸಾವನ್ನಪ್ಪಿದ್ದಾನೆ. ಗೋವಾದಲ್ಲಿ ಕೆಲಸ ಮಾಡುತಿದ್ದ ಈತ ಕುಮಟಾದಲ್ಲಿನ ಮನೆಗೆ ತೆರಳುತ್ತಿರುವಾಗ ಅವಘಡ ಸಂಭವಿಸಿದೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಭಟ್ಕಳ ತಾಲೂಕಿನ ಶಿರಾಲಿ ಮೂಲದ ಪ್ರಕಾಶ ನಾಗಪ್ಪ ಶೆಟ್ಟಿ (50) ಮೃತ ದುರ್ದೈವಿ. ಹೊನ್ನಾವರ ಪೋಸ್ಟ್ ಆಫೀಸಿನಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಈತ ಹೊನ್ನಾವರದಿಂದ ಭಟ್ಕಳ ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.