ಕರ್ನಾಟಕ

karnataka

ETV Bharat / state

ಉತ್ತರ ಕನ್ನಡದಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿ: ಸಾವಿನ ಸಂಖ್ಯೆ 19ಕ್ಕೆ ಏರಿಕೆ - ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಇಬ್ಬರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾದ ಕಾರಣ ಇಂದು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿದೆ.

Uttara Kannada
ಕೊರೊನಾ

By

Published : Jul 28, 2020, 12:52 PM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಉಲ್ಬಣಿಸುತ್ತಿದ್ದು, ಈ ವೈರಸ್​ಗೆ ಇಂದು ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಕಾರವಾರ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೊನ್ನಾವರ ಮೂಲದ 78 ವರ್ಷದ ವ್ಯಕ್ತಿ ಹಾಗೂ ಕಾರವಾರ ಮೂಲದ 65 ವರ್ಷದ ಮಹಿಳೆ ಇಂದು ಸಾವನ್ನಪ್ಪಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇಬ್ಬರು, ಎರಡು ದಿನಗಳ ಹಿಂದೆ ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details