ಭಟ್ಕಳ :ಮುರ್ಡೇಶ್ವರಕ್ಕೆ ಬಂದಿದ್ದ ಎರಡು ಪ್ರತ್ಯೇಕ ಪ್ರವಾಸಿಗರ ತಂಡದ ಇಬ್ಬರು ವ್ಯಕ್ತಿಗಳು ಸಮುದ್ರ ಪಾಲಾದ ಘಟನೆ ನಡೆದಿದೆ. ಬೆಂಗಳೂರಿನಿoದ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ 9 ಸ್ನೇಹಿತರ ತಂಡ ಈಜಲು ಸಮುದ್ರಕ್ಕೆ ಇಳಿದಿದ್ದರು. ಅದರಲ್ಲಿ ಅಭಿಜಿತ್ (26) ಎಂಬಾತ ನೀರು ಪಾಲಾಗಿದ್ದಾನೆ.
ಮೃತ ವ್ಯಕ್ತಿ ಪಶ್ಚಿಮ ಬಂಗಾಳದ ಮೂಲದವನಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಮುದ್ರದಲ್ಲಿ ಭಾರಿ ಅಲೆಗಳಿದ್ದರೂ ಈಜಲು ತೆರಳಿದ ಪರಿಣಾಮ ಈ ಅವಘಡ ಸಂಭವಿಸಿದೆ.