ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರವಾಸಕ್ಕೆ ಬಂದ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದು ಮೂವರನ್ನು ರಕ್ಷಿಸಿದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ತನ್ನ ತಂದೆ ತಾಯಿಯೊಂದಿಗೆ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ಸದಸ್ಯರಲ್ಲಿ ಸುಶಾಂತ ಎಂ.ಎಸ್. ಎಂಬ ಯುವಕ ಸಮುದ್ರ ಪಾಲಾಗಿದ್ದಾನೆ ಎಂದು ಮುರುಡೇಶ್ವರ ಪೊಲೀಸರು ಮಾಹಿತಿ ನೀಡಿದ್ದಾರೆ.
ಶ್ರೀನಿವಾಸ್‌ಪುರದ 12 ಯುವಕರು ಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದಾಗ ಇದ್ದಕ್ಕಿದ್ದಂತೆ ದೊಡ್ಡ ಅಲೆಯೊಂದು ಬಂದು ಮೂವರನ್ನು ಎಳೆದುಕೊಂಡಿದೆ. ಅವರಲ್ಲಿ ಇಬ್ಬರು ಯುವಕರನ್ನು ರಕ್ಷಿಸಿದ್ದು, ಅಬ್ರಾರ್ ಶೇಖ್ ಎಂಬಾತನು ಅಲೆಗಳ ನಡುವೆ ಕಣ್ಮರೆಯಾಗಿದ್ದಾನೆ.