ಮಂಗಳೂರು : ಅಪರಿಚಿತ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಕಾಫಿಕಾಡ್ನಲ್ಲಿ ನಡೆದಿದೆ.
ಅಪರಿಚಿತ ಶವ ಪತ್ತೆ : ಉಳ್ಳಾಲ ಠಾಣೆಯಲ್ಲಿ ಪ್ರಕರಣ - Uknown Person Murder In Mangalore
ಮಂಗಳೂರಿನಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ಯುವಕನ ಹತ್ಯೆ
ಕಾಫಿಕಾಡ್ನ ರೈಲ್ವೆ ಹಳಿ ಸಮೀಪ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ಗುರುತು ಸಿಕ್ಕಿಲ್ಲ, ಮೃತ ವ್ಯಕ್ತಿಯ ಎದೆ ಮತ್ತು ಬೆನ್ನಿನ ಭಾಗದಲ್ಲಿ ಇರಿದು ಹತ್ಯೆ ಮಾಡಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.