ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿಯಲ್ಲಿ ಶವವೊಂದು ಪತ್ತೆಯಾಗಿದ್ದು, ವಾಹನ ಅಪಘಾತದಿಂದ ವ್ಯಕ್ತಿ ಸಾವಿಗೀಡಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಮಾವಳ್ಳಿಯ ಕಾಡಿನಲ್ಲಿ ಅಪರಿಚಿತ ಶವ ಪತ್ತೆ... ಅಪಘಾತದ ಶಂಕೆ! - ಉತ್ತರ ಕನ್ನಡ
ಮಾವಳ್ಳಿಯ ರಸ್ತೆ ಪಕ್ಕದ ಕಾಡಿನಲ್ಲಿ ಶವವೊಂದು ಪತ್ತೆಯಾಗಿದೆ. ದೇಹದ ಮೇಲೆ ರಕ್ತದ ಕಲೆಗಳು ಇರುವ ಕಾರಣ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಅಪರಿಚಿತ ಶವ
ಕಿರವತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಮಾವಳ್ಳಿಯ ರಸ್ತೆಯ ಪಕ್ಕದ ಕಾಡಿನಲ್ಲಿ ಶವ ಪತ್ತೆಯಾಗಿದೆ. ದೇಹದ ಮೇಲೆ ರಕ್ತದ ಕಲೆಗಳು ಇರುವ ಕಾರಣ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳಕ್ಕೆ ಯಲ್ಲಾಪುರ ಸಿಪಿಐ ಡಾ.ಮಂಜುನಾಥ್ ನಾಯಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.