ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕೊರೊನಾ ಕರ್ಫ್ಯೂವನ್ನು ಇನ್ನಷ್ಟು ಬಿಗಿಗೊಳಿಸಿದ್ದು, ಅನವಶ್ಯಕವಾಗಿ ಓಡಾಡುವವರಿಗೆ ದಂಡದ ಜೊತೆಗೆ ವಾಹನಗಳನ್ನು ಸೀಜ್ ಮಾಡುವ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಕಾರವಾರದಲ್ಲಿ ಕರ್ಫ್ಯೂ ವೇಳೆ ಅನಗತ್ಯ ಓಡಾಟ: ದಂಡದ ಜೊತೆಗೆ ವಾಹನ ಜಪ್ತಿ - ಅನಾವಶ್ಯಕ ಓಡಾಟ
ಬೆಳಗ್ಗೆ 10 ಗಂಟೆ ಮೇಲೆ ಅನವಶ್ಯಕವಾಗಿ ಓಡಾಡುವವರನ್ನು ತಡೆದು ವಿಚಾರಿಸಲಾಗುತ್ತಿದೆ. ಸೂಕ್ತ ಕಾರಣ ಇಲ್ಲದೆ ಓಡಾಡಿದವರಿಗೆ ದಂಡ ವಿಧಿಸಲಾಗುತ್ತಿದೆ. ಅಲ್ಲದೆ ಮತ್ತೊಮ್ಮೆ ನಿಯಮ ಉಲ್ಲಂಘಿಸಿದವರ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಗುರುವಾರ ಒಂದೇ ದಿನ 400 ಪ್ರಕರಣಗಳು ಪತ್ತೆಯಾಗಿದ್ದು, ಇದೀಗ ಪೊಲೀಸ್ ಇಲಾಖೆ ಕೊರೊನಾ ಕರ್ಫ್ಯೂವನ್ನು ಇನ್ನಷ್ಟು ಬಿಗಿಗೊಳಿಸಿದೆ.
ಬೆಳಗ್ಗೆ 10 ಗಂಟೆ ಮೇಲೆ ಅನವಶ್ಯಕವಾಗಿ ಓಡಾಡುವವರನ್ನು ತಡೆದು ವಿಚಾರಿಸಲಾಗುತ್ತಿದೆ. ಸೂಕ್ತ ಕಾರಣ ಇಲ್ಲದೆ ಓಡಾಡಿದವರಿಗೆ ದಂಡ ವಿಧಿಸಲಾಗುತ್ತಿದೆ. ಅಲ್ಲದೆ ಮತ್ತೊಮ್ಮೆ ನಿಯಮ ಉಲ್ಲಂಘಿಸಿದವರ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಂದು ಕೂಡ ನಗರದ ಶಿವಾಜಿ ಸರ್ಕಲ್ ಬಳಿ ಅನವಶ್ಯಕವಾಗಿ ಓಡಾಡುವವರನ್ನು ತಡೆದ ಪೊಲೀಸರು, ದಂಡದ ಜೊತೆಗೆ ಕೆಲವರ ವಾಹನಗಳನ್ನು ಸೀಜ್ ಮಾಡುವ ಮೂಲಕ ಬಿಗಿ ಕ್ರಮ ಕೈಗೊಂಡಿದ್ದಾರೆ.