ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಷ್ಟಾದರೂ ಅಪಾಯಕಾರಿ ಅಲೆಗಳ ಅಬ್ಬರದ ನಡುವೆ ಹತ್ತಾರು ಯುವಕರು ಮೋಜು ಮಸ್ತಿಯಲ್ಲಿ ತೊಡಗಿದ್ದ ಘಟನೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಕಂಡುಬಂತು.
ಕಡಲತೀರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರಿಂದ ಜಿಲ್ಲಾಡಳಿತ ಕೂಡ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿತ್ತು. ಹೀಗಿದ್ದರೂ ಸಹ ಯುವಕರು ಹಿಂಜರಿಯದೆ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಯುವಕರನ್ನು ತರಾಟೆ ತೆಗೆದುಕೊಂಡಿದ್ದು, ಸಮುದ್ರದಿಂದ ಓಡಿಸಿದ್ದಾರೆ.