ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಘಟ್ಟದ ಮೇಲ್ಭಾಗದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಉತ್ತರ ಕನ್ನಡದಲ್ಲಿ ಅಕಾಲಿಕ ಮಳೆ: ಜನಜೀವನ ಅಸ್ತವ್ಯಸ್ತ - ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ ಸುರಿದು ಜನ ಹೈರಾಣಗುಂತೆ ಮಾಡಿದೆ. ಮೋಡ ಕವಿದ ವಾತಾವರಣದಿಂದ ಜನ ಮನೆಯಿಂದ ಹೊರ ಬರಲು ಹಿಂದೇಟು ಹಾಕಿದ್ದಾರೆ.
ಉತ್ತರಕನ್ನಡದಲ್ಲಿ ಅಕಾಲಿಕ ಮಳೆ
ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಮಧ್ಯಾಹ್ನದ ವೇಳೆಗೆ ಸುರಿದ ಮಳೆ ಸಂಜೆ ಹೊತ್ತಿಗೆ ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ ಭಾಗದಲ್ಲಿ ಸುರಿದಿದೆ. ಕುಮಟಾ ಹಾಗೂ ಕಾರವಾರದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಳೆಯಿಂದಾಗಿ ಜನ ಕಂಗಾಲಾಗಿದ್ದು, ಎಲ್ಲೆಡೆ ಮೋಡ ಕವಿದ ವಾತಾವರಣ ಮುಂದುವರೆದಿದೆ. ಬೀದಿಬದಿ ವ್ಯಾಪಾರಿಗಳು, ಮನೆ ರೀಪೇರಿ ಸೇರಿದಂತೆ ಇನ್ನಿತರ ಕೆಲಸದಲ್ಲಿ ತೊಡಗಿಕೊಂಡಿದ್ದವರಿಗೆ ಏಕಾಏಕಿ ಸುರಿದ ಮಳೆಯಿಂದ ತೊಂದರೆಯಾಗಿದೆ.