ಕರ್ನಾಟಕ

karnataka

ETV Bharat / state

ಉತ್ತರ ಕನ್ನಡ ಜಿಲ್ಲೆಯಲ್ಲಿ 20 ಮಂದಿ ಗುಣಮುಖ: ಮತ್ತೆ 19 ಮಂದಿಗೆ ಸೋಂಕು ದೃಢ! - ಉತ್ತರ ಕನ್ನಡ ಕೊರೊನಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ 19 ಜನರಿಗೆ ಸೋಂಕು ದೃಢವಾಗಿದೆ. ಸದ್ಯ ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 489ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 204 ಮಂದಿ ಗುಣಮುಖರಾಗಿದ್ದಾರೆ. ಉಳಿದ 283 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ.

Uttara Kannada corona update
ಕೊರೊನಾ

By

Published : Jul 8, 2020, 7:37 PM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 20 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದ ಬೆನ್ನಲ್ಲೇ ಮತ್ತೆ 19 ಜನರಿಗೆ ಸೋಂಕು ಇರುವುದು ಪತ್ತೆಯಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಸೋಂಕು ಕಾಣಿಸಿಕೊಂಡು ಕಾರವಾರದ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಕೊರೊನಾ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಯಲ್ಲಾಪುರದ 6, ಮುಂಡಗೋಡಿನ 6, ಕಾರವಾರ 2, ದಾಂಡೇಲಿ 2, ಬಳ್ಳಾರಿಯ ಓರ್ವ ಹಾಗೂ ವಿಜಯಪುರದ ಬಸ್ ಕಂಡಕ್ಟರ್ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸೋಂಕಿತರು ಗುಣಮುಖರಾಗಿ ಬಿಡುಗಡೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ 19 ಮಂದಿಗೆ ಸೋಂಕು ದೃಢಗಿದೆ. ಅದರಲ್ಲಿ ಭಟ್ಕಳದ ತಲಾ ಮೂವರು ಬಾಲಕಿಯರು ಹಾಗೂ ಬಾಲಕರು, ಇಬ್ಬರು ಯುವಕರು, ಮೂವರು ಯುವತಿಯರು ಹಾಗೂ ಇಬ್ಬರು ಮಹಿಳೆಯರು ಸೇರಿ 13 ಮಂದಿಗೆ ಸೋಂಕು ತಗುಲಿದೆ. ಉಳಿದಂತೆ ಯಲ್ಲಾಪುರದ ಮೂವರು ಪುರುಷರು, ಹಳಿಯಾಳದ ಇಬ್ಬರು ಮಹಿಳೆಯರು ಹಾಗೂ ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೃದ್ಧೆಗೂ ಸೋಂಕು ಇರುವುದು ಪತ್ತೆಯಾಗಿದೆ.

ಜಿಲ್ಲೆಯಲ್ಲಿ 20 ಮಂದಿ ಗುಣಮುಖ

ಸದ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 489 ಪ್ರಕರಣಗಳು ಪತ್ತೆಯಾಗಿದ್ದು, 204 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದು, 283 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details