ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಳಿಕೆಯಲ್ಲಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಜಿಲ್ಲೆಯಾದ್ಯಂತ ಇಂದು ಬರೋಬ್ಬರಿ 1020 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 21 ಮಂದಿ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡದಲ್ಲಿ ಮತ್ತೆ ಸಾವಿರ ಗಡಿ ದಾಟಿದ ಕೊರೊನಾ: 21 ಮಂದಿ ಸಾವು
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 1020 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 38,602ಕ್ಕೆ ಏರಿಕೆಯಾದಂತಾಗಿದೆ.
ಕಳೆದ ಎರಡು ದಿನದಿಂದ ಮತ್ತೆ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ಪಾಸಿಟಿವ್ ಪ್ರಕರಣಗಳ ಪೈಕಿ ಕಾರವಾರ-61, ಅಂಕೋಲಾ-92, ಕುಮಟಾ-159, ಹೊನ್ನಾವರ-109, ಭಟ್ಕಳ-87, ಶಿರಸಿ-124, ಸಿದ್ದಾಪುರ- 88, ಯಲ್ಲಾಪುರ-75, ಮುಂಡಗೋಡ-135, ಹಳಿಯಾಳ-116 ಹಾಗೂ ಜೋಯಿಡಾದಲ್ಲಿ 74 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.
ಜಿಲ್ಲೆಯಲ್ಲಿ ಸದ್ಯ 6,025 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 472 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 5553 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ನಿನ್ನೆ ಒಂದೇ ದಿನ 1,350 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ ಜಿಲ್ಲೆಯಾದ್ಯಂತ 32,086 ಮಂದಿ ಚೇತರಿಸಿಕೊಂಡಂತಾಗಿದೆ. ಮತ್ತೆ 21 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 491ಕ್ಕೇರಿದೆ.