ಕಾರವಾರ:ಮುಷ್ಕರನಿರತ ಉತ್ತರ ಕನ್ನಡ ಜಿಲ್ಲೆಯ ಸಾರಿಗೆ ನೌಕರರನ್ನು ವರ್ಗಾವಣೆಗೊಳಿಸಿದ ಬೆನ್ನಲ್ಲೇ 60ಕ್ಕೂ ಹೆಚ್ಚು ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದು, ಜಿಲ್ಲೆಯಾದ್ಯಂತ ಕೆಲ ಭಾಗಗಳಿಗೆ ಕೊನೆಗೂ ಬಸ್ ಸಂಚಾರ ಪ್ರಾರಂಭಗೊಂಡಿದೆ.
ಕಳೆದ ಐದು ದಿನಗಳಿಂದ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಪೂರ್ಣ ಸಾರಿಗೆ ಸಂಚಾರ ಬಂದ್ ಮಾಡಿದ್ದರು. ಮುಷ್ಕರನಿರತ ಸಿಬ್ಬಂದಿಯ ಮನವೊಲಿಸಲು ಸರ್ಕಾರ ಯತ್ನಿಸಿತ್ತಾದರು ಸಾಧ್ಯವಾಗಿರಲಿಲ್ಲ. ಇದರಿಂದ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿತ್ತು. ಕೊನೆಗೆ ಸರ್ಕಾರ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗದಿಂದ ಒಟ್ಟು 248 ಸಿಬ್ಬಂದಿಯನ್ನು ವರ್ಗಾವಣೆ ಮಾಡಿತ್ತು.
ಕಾರವಾರದಲ್ಲಿ ಕರ್ತವ್ಯಕ್ಕೆ ಹಾಜರಾದ 60ಕ್ಕೂ ಹೆಚ್ಚು ಸಾರಿಗೆ ಸಿಬ್ಬಂದಿ ಅದಲ್ಲಿ ಉತ್ತರ ಕನ್ನಡ ಜಿಲ್ಲೆಯ 48 ಸಾರಿಗೆ ಸಿಬ್ಬಂದಿಯನ್ನು ವರ್ಗಾವಣೆ ಮಾಡಿತ್ತು. ವರ್ಗಾವಣೆ ಆತಂಕದಿಂದಾಗಿ ಇಂದು ಜಿಲ್ಲೆಯ ವಿವಿಧ ಭಾಗಗಳಿಂದ ಒಟ್ಟು 60ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯ ವಿವಿಧ ಭಾಗಗಳಿಗೆ ಈಗಾಗಲೇ ಬಸ್ ಸಂಚಾರ ಆರಂಭಗೊಂಡಿದೆ.
ಕಳೆದ ಐದು ದಿನಗಳಿಂದ ಬಸ್ ಇಲ್ಲದೆ ಪರದಾಡುತ್ತಿದ್ದ ಪ್ರಯಾಣಿಕರು ಇದೀಗ ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಮೊದಲ ಹಂತದಲ್ಲಿ ಜಿಲ್ಲೆಯಾದ್ಯಂತ ಸಂಚಾರ ಪ್ರಾರಂಭಿಸಿದ್ದು, ಸಂಜೆ ಹೊತ್ತಿಗೆ ಮತ್ತಷ್ಟು ವಾಯುವ್ಯ ಸಾರಿಗೆ ಸಂಸ್ಥೆ ಬಸ್ಗಳು ಪ್ರಾರಂಭವಾಗುವ ನಿರೀಕ್ಷೆ ಇದೆ.