ಕಾರವಾರ:ಕೊರೊನಾ ಸೋಂಕು ತಗುಲಿ ಕಾರವಾರದ ವೈದ್ಯಕೀಯ ಮಹಾವಿದ್ಯಾಲಯದ ಕೋವಿಡ್-19 ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಂಪೂರ್ಣ ಗುಣಮುಖರಾದ ಹಿನ್ನೆಲೆ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಉತ್ತರ ಕನ್ನಡದಲ್ಲಿ ಮೂವರು ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - Karavara Medical College
ಕೊರೊನಾ ಸೋಂಕು ತಗುಲಿ ಕಾರವಾರದ ವೈದ್ಯಕೀಯ ಮಹಾವಿದ್ಯಾಲಯದ ಕೋವಿಡ್-19 ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಂಪೂರ್ಣ ಗುಣಮುಖರಾದ ಹಿನ್ನೆಲೆ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಸಿದ್ದಾಪುರದ 18 ವರ್ಷ ಹಾಗೂ 20 ವರ್ಷದ ಇಬ್ಬರು ಯುವತಿಯರು, ಕಾರವಾರದ 45 ವರ್ಷದ ಮಹಿಳೆ ಗುಣಮುಖರಾಗಿ ಬಿಡುಗಡೆಯಾದವರು. 12 ದಿನಗಳ ಹಿಂದೆ ಸೋಂಕು ಕಾಣಿಸಿಕೊಂಡು ಈ ಮೂವರು ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಇದೀಗ ಗಂಟಲು ದ್ರವದ ಪರೀಕ್ಷೆ ನಡೆಸಿದ್ದು, ವರದಿ ನೆಗೆಟಿವ್ ಬಂದ ಹಿನ್ನೆಲೆ ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಬೀಳ್ಕೊಡುಗೆ ವೇಳೆ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಗಜಾನನ ಹಾಗೂ ಸರ್ಜನ್ ಶಿವಾನಂದ್ ಕುಡ್ತಲ್ಕರ್ ಮೂವರಿಗೂ ಹೂ ನೀಡಿ ಶುಭ ಕೋರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿದ್ದ 96 ಸೋಂಕಿತರ ಪೈಕಿ 85 ಮಂದಿ ಗುಣಮುಖರಾಗಿದ್ದು, ಇನ್ನೂ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.