ಕರ್ನಾಟಕ

karnataka

ETV Bharat / state

ನಿಲ್ಲದ ಮಳೆ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದೂ ಶಾಲಾ-ಕಾಲೇಜುಗಳಿಗೆ ರಜೆ

ಮಳೆಯ ಅಬ್ಬರ ಇನ್ನೂ ನಿಲ್ಲದ ಕಾರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎಲ್ಲೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಶೈಕ್ಷಣಿಕ ಕಲಿಕೆಗೆ ತೊಂದರೆ ಎದುರಾಗಿದೆ.

ಮಳೆಗೆ ಶಾಲಾ-ಕಾಲೇಜು ರಜೆ ಘೋಷಣೆ

By

Published : Aug 8, 2019, 9:24 AM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆಯಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರವೂ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಳೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಬಹುತೇಕ ಭಾಗಗಳು ಜಲಾವೃತಗೊಂಡಿವೆ. ನದಿಗಳು ಉಕ್ಕಿ ಹರಿಯುತ್ತಿವೆ. ಮಳೆ ಕೂಡ ನಿರಂತರವಾಗಿ ಸುರಿಯುತ್ತಿರುವುದರಿಂದ ಕೆಲ ಭಾಗಗಳಲ್ಲಿ ಮಕ್ಕಳು ಶಾಲೆಗೆ ಬರಲು ಸಾಧ್ಯವೇ ಇಲ್ಲದ ಪರಿಸ್ಥಿತಿ ಇದೆ. ಶಾಲಾ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಕಾರವಾರ ಹಾಗೂ ಶಿರಸಿ ಎರಡು ಶೈಕ್ಷಣಿಕ ಜಿಲ್ಲೆಗೆ ಗುರುವಾರವೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ್ ಆದೇಶ ನೀಡಿದ್ದಾರೆ.

ಸತತ ಮೂರು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾದಂತಾಗಿದೆ.

ABOUT THE AUTHOR

...view details