ಕಾರವಾರ:ಪಶ್ಚಿಮ ನೌಕಾ ವಲಯ ಮುಖ್ಯಸ್ಥ ವೈಸ್ ಅಡ್ಮಿರಲ್ ಆರ್. ಹರಿಕುಮಾರ್ ಕಾರವಾರದ ಕದಂಬ ನೌಕಾನೆಲೆಗೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಫೆ. 21 ರಂದು ಪಶ್ಚಿಮ ನೌಕಾ ವಲಯದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಕದಂಬ ನೌಕಾನೆಲೆಗೆ ಆಗಮಿಸಿದ ಅವರನ್ನು ಕರ್ನಾಟಕ ನೌಕಾ ಪ್ರದೇಶದ ಮುಖ್ಯಸ್ಥ ರಿಯರ್ ಅಡ್ಮಿರಲ್ ಮಹೇಶ ಸಿಂಗ್ ಸ್ವಾಗತಿಸಿದರು. ಇದೇ ವೇಳೆ, ನೌಕಾದಳದಿಂದ ಗೌರವ ವಂದನೆ ಸಲ್ಲಿಸಲಾಯಿತು. ಬಳಿಕ ಕರ್ನಾಟಕ ನೌಕಾ ಪ್ರದೇಶದಲ್ಲಿನ ಹಡಗುಗಳು ಮತ್ತು ಘಟಕಗಳ ಕಾರ್ಯಾಚರಣೆಯ ಸಿದ್ಧತೆ ಪರಿಶೀಲಿಸಿದರು.