ಕಾರವಾರ: ಅದು ಪ್ರವಾಸಿಗರ ಉಳಿಯುವಿಕೆಗಾಗಿ ಪ್ರಾರಂಭಿಸಿದ ರೆಸಾರ್ಟ್. ಇದೀಗ ಅದರ ಸುತ್ತಮುತ್ತ ಸ್ಥಳೀಯರು ಓಡಾಡುವುದಕ್ಕೆ ಭಯಪಡುತ್ತಿದ್ದಾರೆ. ಇದಕ್ಕೆ ಕಾರಣ ಪ್ರವಾಸಿಗರ ಉಳಿಯುವಿಕೆಯ ಬದಲು ಬಿಹಾರ, ಉತ್ತರ ಪ್ರದೇಶ ಸೇರಿದಂತೆ ಹೊರರಾಜ್ಯಗಳ ಕಾರ್ಮಿಕರು ನೆಲೆಯೂರಿದ್ದು, ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕಾರವಾರ ತಾಲೂಕಿನ ಶಿರವಾಡದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಸುಮಾರು 500ಕ್ಕೂ ಅಧಿಕ ಹೊರರಾಜ್ಯದ ಕಾರ್ಮಿಕರಿದ್ದಾರೆ. ರೆಸಾರ್ಟ್ಗೆ ಅನುಮತಿ ನೀಡಿದ ಜಾಗದಲ್ಲಿ ಉಳಿಯಲು ಅವಕಾಶ ನೀಡಿದವರು ಯಾರು ಎನ್ನುವ ಪ್ರಶ್ನೆಯನ್ನು ಸ್ಥಳೀಯರು ಕೇಳುತ್ತಿದ್ದಾರೆ.
ಅಸಭ್ಯವಾಗಗಿ ವರ್ತಿಸುತ್ತಿರುವ ಕಾರ್ಮಿಕರ ಬಗ್ಗೆ ಸ್ಥಳೀಯರ ಆರೋಪ ಕಳೆದ ಹಲವು ವರ್ಷಗಳಿಂದ ಚಾಲ್ತಿಯಲ್ಲಿದ್ದ ರೆಸಾರ್ಟ್ನಲ್ಲಿ ಕದಂಬ ನೌಕಾನಲೆ ಎರಡನೇ ಹಂತದ ವಿಸ್ತರಣೆ ಕಾಮಗಾರಿ ಗುತ್ತಿಗೆ ಪಡೆದ ಐಟಿಡಿಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಬಿಹಾರ ಸೇರಿದಂತೆ ಉತ್ತರ ಭಾರತದ ರಾಜ್ಯಗಳ ಕಾರ್ಮಿಕರು ತಂಗಿದ್ದಾರೆ. ರೆಸಾರ್ಟ್ನ ಬೋರ್ಡ್ ತೆಗೆದ ಕಂಪನಿ ತಮ್ಮ ಬೋರ್ಡ್ ಹಾಕಿ, ಕಾರ್ಮಿಕರಿಗೆ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಇದರಿಂದ ಕಳೆದೊಂದು ವರ್ಷದಿಂದ ರೆಸಾರ್ಟ್ ಸುತ್ತಮುತ್ತ ಸಂಜೆಯಾದ್ರೆ ಸಾಕು ಅಕ್ಕಪಕ್ಕದ ಮನೆಯವರು ಓಡಾಡದ ಪರಿಸ್ಥಿತಿ ತಲೆದೋರಿದೆ. ಕೆಲಸ ಮುಗಿಸಿಕೊಂಡು ಬರುವ ಕಾರ್ಮಿಕರು ಅಕ್ಕ ಪಕ್ಕದ ಮನೆಗಳ ಹೆಣ್ಣು ಮಕ್ಕಳೂಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದಾಗಿ ಸ್ಥಳೀಯರು ಆರೋಪಿಸುತ್ತಿದ್ದಾರೆ.
ರೆಸಾರ್ಟ್ನಲ್ಲಿ ಪ್ರವಾಸೋದ್ಯಮಕ್ಕೆ ಬದಲು ಕಾರ್ಮಿಕರನ್ನು ಉಳಿಸಿಕೊಳ್ಳಲು ಮಾಲೀಕರು ಸ್ಥಳೀಯ ಪಂಚಾಯತಿ ಅಥವಾ ತಾಲೂಕು ಆಡಳಿತದಿಂದ ಅನುಮತಿ ಪಡೆಯದೇ ಹಾಗೇ ಉಳಿದುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಈಗಾಗಲೇ ಸಮಸ್ಯೆ ಗಮನಕ್ಕೆ ಬಂದಿದ್ದು ಪೊಲೀಸ್ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ:2023ರ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ