ಕಾರವಾರ (ಉತ್ತರ ಕನ್ನಡ):ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸರ್ಕಾರ ಇಂದುಮಾಸ್ಕ್ ದಿನ ಆಚರಿಸಿತು. ಆದರೆ, ಮಾಸ್ಕ್ ಧರಿಸಿ ಮಾದರಿಯಾಗಬೇಕಿದ್ದ ಸಂಸದ ಅನಂತ ಕುಮಾರ್ ಹೆಗಡೆ ಮಾತ್ರ ಅದಕ್ಕೂ ನನಗೂ ಸಂಬಂಧವೇ ಇಲ್ಲದಂತೆ ವರ್ತಿಸಿದ್ದಾರೆ.
ಮಾಸ್ಕ್ ಧರಿಸದೆ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ ಸಂಸದ ಅನಂತ ಕುಮಾರ್ - ಲಾಕ್ಡೌನ್ ನಿಯಮ ಉಲ್ಲಂಘಿಸಿದ ಸಂಸದರು
ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಸಂಸದರು ಸರ್ಕಾರದ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ವರ್ತಿಸಿದ್ದಾರೆ.
![ಮಾಸ್ಕ್ ಧರಿಸದೆ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ ಸಂಸದ ಅನಂತ ಕುಮಾರ್ Violation of lock down rules](https://etvbharatimages.akamaized.net/etvbharat/prod-images/768-512-7669602-164-7669602-1592482248272.jpg)
ಮಾಸ್ಕ್ ಧರಿಸದ ಸಂಸದ
ಜಿಲ್ಲಾ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗಿನ ಸಭೆಗೆ ಆಗಮಿಸಿದ್ದ ಅನಂತ ಕುಮಾರ್ ಹೆಗಡೆ ಅವರು ಮಾತ್ರ ಮಾಸ್ಕ್ ಧರಿಸದೆ ಬೇಜವಾಬ್ದಾರಿತನ ತೋರಿದ್ದಾರೆ.
ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ ಸಂಸದ ಅನಂತ ಕುಮಾರ್
ಇಡೀ ಸಭೆಯಲ್ಲಿ ಅಧಿಕಾರಿಗಳು ಮಾಸ್ಕ ಧರಿಸಿದ್ದರು. ಸಂಸದರು ಮಾತ್ರ ಮಾಸ್ಕ ಧರಿಸಿರಲಿಲ್ಲ. ಈ ಮೂಲಕ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.
Last Updated : Jun 18, 2020, 9:38 PM IST