ಕರ್ನಾಟಕ

karnataka

ETV Bharat / state

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾರ್ಯಕರ್ತರಿಗಾಗಿ ಕೆಲಸ ಮಾಡುತ್ತೇವೆ : ಸಚಿವ ಹೆಬ್ಬಾರ್ - ಪಂಚಾಯಿತಿ ಚುನಾವಣೆ ಕುರಿತು ಶಿರಸಿಯಲ್ಲಿ ಮಾತನಾಡಿದ ಶಿವರಾಮ್ ಹೆಬ್ಬಾರ್

ನಮ್ಮದು ರಾಷ್ಟ್ರೀಯ ಪಕ್ಷ. ಬಿಜೆಪಿ ಎಂಬುದೇ ನಮ್ಮ ಬಣ ಹೊರತು, ನಮ್ಮೊಳಗೆ ಪ್ರತ್ಯೇಕ ಬಣಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ. ಅದೆಲ್ಲ ಕೇವಲ ಊಹಾಪೋಹ..

Minister Hebbar
ಸಚಿವ ಶಿವರಾಮ ಹೆಬ್ಬಾರ್

By

Published : Nov 30, 2020, 7:46 PM IST

ಶಿರಸಿ :ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಕಾರ್ಯಕರ್ತರ ಗೆಲುವಿಗಾಗಿ ಜಿಲ್ಲೆಯ ನಾಯಕರೆಲ್ಲಾ ಸೇರಿ ಕೆಲಸ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್​ ತಿಳಿಸಿದ್ದಾರೆ.

ತಾಲೂಕಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಚಿಹ್ನೆ ಅಡಿ ಅಲ್ಲದಿದ್ದರೂ ಪಕ್ಷದ ಕಾರ್ಯಕರ್ತರು ಸ್ಪರ್ಧಿಸುವ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಕೆಲಸ ಮಾಡುವ ಹೊಣೆ ನಾಯಕರ ಮೇಲಿದೆ.

ನಾವು ನಿಂತಾಗ ಹಗಲಿರುಳು ಶ್ರಮಿಸಿ ಗೆಲ್ಲಿಸುವ ಕಾರ್ಯಕರ್ತರು ಸ್ಪರ್ಧಿಸುವ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.

ಸಚಿವ ಶಿವರಾಮ ಹೆಬ್ಬಾರ್​ ಮಾತನಾಡಿದರು

ನಮಗಾಗಿ ಶ್ರಮಪಟ್ಟು ಕೆಲಸ ಮಾಡುವ ಕಾರ್ಯಕರ್ತರ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಲು ಕೆಲಸ ಮಾಡಬೇಕಾಗಿದ್ದು, ನಮ್ಮ ಕರ್ತವ್ಯವಾಗಿದೆ. ಈಗ ಅವರು ಚುನಾವಣೆಗೆ ಸ್ಪರ್ಧಿಸುವ ಸಮಯ ಬಂದಿದೆ.

ಹೀಗಾಗಿ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇವೆ. ಗ್ರಾಮ ಪಂಚಾಯತ್ ಚುನಾವಣೆಯನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸಮರ್ಥವಾಗಿ ಎದುರಿಸಲಿದೆ. ರಾಜ್ಯದಲ್ಲಿ ನಾಲ್ಕು ತಂಡಗಳಾಗಿ ಗ್ರಾಮ ಸ್ವರಾಜ್ಯ ಸಮಾವೇಶ ನಡೆಸುತ್ತಿದ್ದು, ಡಿಸೆಂಬರ್​ 3ರಂದು ಶಿರಸಿ ಹಾಗೂ ಹೊನ್ನಾವರದಲ್ಲಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಜರುಗಲಿದೆ ಎಂದರು.

ಬಿಜೆಪಿಯಲ್ಲಿ ಭಿನ್ನಮತ ಇದೆ ಎಂಬುದು ಮಾಧ್ಯಮಗಳ ಸೃಷ್ಟಿ. ನಮ್ಮದು ರಾಷ್ಟ್ರೀಯ ಪಕ್ಷ. ಬಿಜೆಪಿ ಎಂಬುದೇ ನಮ್ಮ ಬಣ ಹೊರತು, ನಮ್ಮೊಳಗೆ ಪ್ರತ್ಯೇಕ ಬಣಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ. ಅದೆಲ್ಲ ಕೇವಲ ಊಹಾಪೋಹ ಎಂದು ತೆರೆ ಎಳೆದರು.

For All Latest Updates

TAGGED:

ABOUT THE AUTHOR

...view details