ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ಟೆಂಪೋ ಪಲ್ಟಿಯಾಗಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕುಮಟಾದಲ್ಲಿ ನಡೆದಿದೆ. ಪಟ್ಟಣದ ಹೊರಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಒಕ್ಕಲಿಗರ ಸಭಾ ಭವನದಿಂದ ಮದುವೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಾರವಾರ: ಮದುವೆ ದಿಬ್ಬಣದ ಟೆಂಪೋ ಪಲ್ಟಿ: 5 ಮಂದಿಗೆ ಗಾಯ - ಕಾರವಾರದಲ್ಲಿ ಮದುವೆ ದಿಬ್ಬಣದ ಟೆಂಪೋ ಪಲ್ಟಿ
ಕಾರವಾರ ಪಟ್ಟಣದ ಹೊರಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಒಕ್ಕಲಿಗರ ಸಭಾ ಭವನದಿಂದ ಮದುವೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ.
ಮದುವೆ ದಿಬ್ಬಣದ ಟೆಂಪೋ ಪಲ್ಟಿ
ಟೆಂಪೋದಲ್ಲಿ 20ಕ್ಕೂ ಹೆಚ್ಚು ಮಂದಿ ಇದ್ದರು. ಆದರೆ, ಘಟನೆಯಲ್ಲಿ 5 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಗಾಯಗೊಂಡವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ:ಹಿಜಾಬ್ ಪ್ರಕರಣ: ನಿಯಮಾನುಸಾರ ಸಲ್ಲಿಸದ ಅರ್ಜಿ ವಜಾ ಮಾಡಿದ ಕೋರ್ಟ್.. ವಿಚಾರಣೆ ನಾಳೆಗೆ ಮುಂದೂಡಿಕೆ