ಕಾರವಾರ:ನೌಕಾಪಡೆಯ ಪಶ್ಚಿಮ ವಲಯದ ಫ್ಲ್ಯಾಗ್ ಆಫೀಸರ್ ವೈಸ್ ಅಡ್ಮಿರಲ್ ಅಜೇಂದ್ರ ಬಹದ್ದೂರ್ ಸಿಂಗ್ ಭಾನುವಾರ ಕಾರವಾರದ ಕದಂಬ ನೌಕಾನೆಲೆಗೆ ಭೇಟಿ ನೀಡಿ, ಸೀಬರ್ಡ್ ಎರಡನೇ ಹಂತದ ಕಾಮಗಾರಿ ಪರಿಶೀಲಿಸಿದರು.
ಕದಂಬ ನೌಕಾನೆಲೆಗೆ ಆಗಮಿಸಿದ ಅವರನ್ನು ಕರ್ನಾಟಕ ನೌಕಾ ವಿಭಾಗದ ಕಮಾಂಡಿಂಗ್ ಫ್ಲ್ಯಾಗ್ ಆಫೀಸರ್ ರಿಯರ್ ಅಡ್ಮಿರಲ್ ಅತುಲ್ ಆನಂದ್ ಸ್ವಾಗತಿಸಿದರು. ಈ ವೇಳೆ ಅಜೇಂದ್ರ ಬಹದ್ದೂರ್ ಸಿಂಗ್ ಕದಂಬ ನೌಕಾನೆಲೆಯ ಹಡಗುಗಳು ಮತ್ತು ಘಟಕಗಳ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಿದರು. ಸೀಬರ್ಡ್ ಎರಡನೇ ಹಂತದಲ್ಲಿ ಕೈಗೊಳ್ಳಲಾಗುತ್ತಿರುವ ಮೂಲಸೌಕರ್ಯ ಅಭಿವೃದ್ಧಿಯ ಪ್ರಗತಿಯ ಬಗ್ಗೆ ಪ್ರಾಜೆಕ್ಟ್ ಜನರಲ್ ಡೈರೆಕ್ಟರ್ ಜನರಲ್ ಅವರಿಂದ ಮಾಹಿತಿ ಪಡೆದರು.