ಕಾರವಾರ:ಪತಿಯ ಸಾವಿನ ಸುದ್ದಿ ತಿಳಿದು ಆಘಾತಕ್ಕೊಳಗಾದ ಪತ್ನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ನಡೆದಿದೆ.
ಹೊನ್ನಾವರ: ಸಾವಲ್ಲೂ ಒಂದಾದ ಸತಿ-ಪತಿ! - ತೀವ್ರ ಆಘಾತಕ್ಕೊಳಗಾದ ಪತ್ನಿ ಸಾವು
ಕಾರವಾರದಲ್ಲಿ ಪತಿ ಸಾವನ್ನಪ್ಪಿರುವ ವಿಷಯ ತಿಳಿಯುತ್ತಿದ್ದಂತೆ ತೀವ್ರ ಆಘಾತಕ್ಕೊಳಗಾದ ಪತ್ನಿ ಗಂಟೆಯಲ್ಲೇ ಪ್ರಾಣ ಬಿಟ್ಟ ಘಟನೆ ನಡೆದಿದೆ.
ಹಳದಿಪುರದ ವೆಂಕಟೇಶ ಕೊಡಿಯಾ (57) ಹಾಗೂ ಮಾದೇವಿ ಕೊಡಿಯಾ (46) ಒಂದೇ ದಿನ ಇಹಲೋಕ ತ್ಯಜಿಸಿದ ದಂಪತಿ. ಇಂದು ಬೆಳಿಗ್ಗೆ ವೆಂಕಟೇಶ ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ತಕ್ಷಣ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಅವರು ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.
ಪತ್ನಿ ಮಾದೇವಿ ಶಿವಮೊಗ್ಗ ಜಿಲ್ಲೆಯ ಸಾಗರದ ತಮ್ಮ ಮಗಳ ಮನೆಯಲ್ಲಿದ್ದರು. ಪತಿ ಮೃತಪಟ್ಟಿರುವ ವಿಷಯವನ್ನು ಆಕೆಗೆ ತಿಳಿಸಿದ ಕೂಡಲೇ ತೀವ್ರ ಆಘಾತಕ್ಕೆ ಒಳಗಾಗಿ ಎದೆನೋವು ಕಾಣಿಸಿಕೊಂಡಿದೆ. ವಿಷಯ ತಿಳಿಸಿದ ಒಂದು ಗಂಟೆಯೊಳೆಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಗಂಡ-ಹೆಂಡತಿ ಸಾವಿನಲ್ಲೂ ಒಂದಾಗಿದ್ದಾರೆ.