ಉತ್ತರ ಕನ್ನಡ: ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಟ್ಕಳ ತಾಲೂಕಿನ ಶಿರಾಲಿ ಪಂಚಾಯತ್ ವ್ಯಾಪ್ತಿಯ ಮಣ್ಣೊಂಡದಲ್ಲಿ ನಡೆದಿದೆ.
ತವರಿಗೆ ಬಂದು ನೇಣಿಗೆ ಶರಣಾದ ಗೃಹಿಣಿ...! - ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ
ಮದುವೆಯಾಗಿ ಕೇವಲ ಒಂದೂವರೆ ವರ್ಷದಲ್ಲೇ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ತವರಿನಲ್ಲಿ ಗೃಹಿಣಿ ನೇಣಿಗೆ ಶರಣು
ಆಶಾ ರಾಜೇಶ ನಾಯ್ಕ ಮೃತ ಮಹಿಳೆಯಾಗಿದ್ದು, ಒಂದೂವರೆ ವರ್ಷದ ಹಿಂದೆ ಈಕೆಯ ವಿವಾಹವಾಗಿತ್ತು. ಈಗ ಆಶಾ ತನ್ನ ತವರು ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾಳೆ.
ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ವಿ.ಪಿ ಕೊಟ್ರಳ್ಳಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.