ಕಾರವಾರ: ದೀರ್ಘ ಕಾಲದಿಂದ ಅನಾರೋಗ್ಯ ಸಮಸ್ಯೆಗೆ ತುತ್ತಾಗಿದ್ದ ಪ್ರಖ್ಯಾತ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು (67) ಗುರುವಾರ ತಡರಾತ್ರಿ ನಿಧನರಾಗಿದ್ದಾರೆ.
ಪ್ರಖ್ಯಾತ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಇನ್ನಿಲ್ಲ.. - ಕಾರವಾರ
ವಯೋಸಹಜ ಕಾಯಿಲೆಗೆ ತುತ್ತಾಗಿದ್ದ ಪ್ರಖ್ಯಾತ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಗುರುವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಶ್ರೀಪಾದ ಹೆಗಡೆ
ಹೊನ್ನಾವರ ತಾಲೂಕಿನ ಹಡಿನಬಾಳು ಗ್ರಾಮದ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಗೆ ತುತ್ತಾಗಿದ್ದ ಹೆಗಡೆ ದೀರ್ಘಕಾಲದಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ಇಂಡಗುಂಜಿ ಮಹಾಗಣಪತಿ ಮೇಳದಲ್ಲಿ ಮೂಲ ಕಲಾವಿದರಾಗಿದ್ದ ಅವರು ಮೇಳದ 2 ತಲೆಮಾರಿನ ಕೊಂಡಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ರಾಜ್ಯದ ಎಲ್ಲ ಪ್ರಖ್ಯಾತ ಮೇಳಗಳಲ್ಲೂ ಅತಿಥಿ ಕಲಾವಿದರ ಪಾತ್ರ ಮಾಡುತ್ತಿದ್ದರು.