ಶಿರಸಿ:ಮುಂದಿನ ತಿಂಗಳು ಮದುವೆ ನಿಶ್ಚಯವಾಗಿದ್ದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿಯಲ್ಲಿ ನಡೆದಿದೆ.
ಶಿರಸಿಯಲ್ಲಿ ಬಾವಿಗೆ ಹಾರಿ ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ - undefined
ಮದುವೆ ನಿಶ್ಚವಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಉಮ್ಮಚಗಿಯಲ್ಲಿ ನಡೆದಿದೆ.
ಯುವತಿ ಆತ್ಮಹತ್ಯೆ
ಉಮ್ಮಚಗಿ ನಿವಾಸಿ ಆಶಾ ಪೂಜಾರಿ (25) ಮೃತ ಯುವತಿ. ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಮೇ ತಿಂಗಳಲ್ಲಿ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.