ಶಿರಸಿ:ಸಿಎಂಎ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡದ ಶಿರಸಿ ತಾಲೂಕಿನ ಸಂಪಖಂಡದ ಕೂಗ್ತೆಮನೆಯಲ್ಲಿ ನಡೆದಿದೆ.
ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ - Suicide
ಸಿಎಂಎ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡದ ಶಿರಸಿ ತಾಲೂಕಿನ ಬಳಿ ನಡೆದಿದೆ.
ಪರೀಕ್ಷೆಯಲ್ಲಿ ಫೈಲ್ ಆಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
ಶಿರಸಿ ಟಿ.ಆರ್.ಸಿ. ಬ್ಯಾಂಕ್ನಲ್ಲಿ ಕ್ಲರ್ಕ್ ಆಗಿದ್ದ ಕೂಗ್ತೆ ಮನೆಯ ದೀಪಕ್ ಶ್ರೀಧರ ಹೆಗಡೆ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ ಎಂದು ಮಾನಸಿಕವಾಗಿ ನೊಂದು ಮನೆಯ ಹೊರಗಿನ ಅಡಿಕೆ ಅಟ್ಟದ ಕಬ್ಬಿಣದ ತೊಲೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಕುರಿತಂತೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.