ಕರ್ನಾಟಕ

karnataka

ETV Bharat / state

ಅತಿಯಾದ ಮೊಬೈಲ್ ಬಳಕೆ: ಬುದ್ದಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ - woman commits suicide case

ಅತಿಯಾಗಿ ಮೊಬೈಲ್ ಬಳಕೆ ಮಾಡದಂತೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

By

Published : May 3, 2022, 2:29 PM IST

ಕಾರವಾರ: ಅತಿಯಾಗಿ ಮೊಬೈಲ್ ಬಳಕೆ ಮಾಡದಂತೆ ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮುನಿಸಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹಬ್ಬುವಾಡದಲ್ಲಿ ನಡೆದಿದೆ. ಸಿದ್ದಾಪುರದ ನಗರದ ಹಬ್ಬುವಾಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಮೇಘ ಆತ್ಮಹತ್ಯೆ ಮಾಡಿಕೊಂಡವರು.

ಮೇಘ, ಆತ್ಮಹತ್ಯೆ ಮಾಡಿಕೊಂಡ ಯುವತಿ

ಪ್ಯಾರಾಮೆಡಿಕಲ್‌ ಕೋರ್ಸ್‌ ಮುಗಿಸಿಕೊಂಡು ಮನೆಯಲ್ಲಿದ್ದ ಯುವತಿ ಮೊಬೈಲ್ ಅತಿಯಾಗಿ ಬಳಕೆ ಮಾಡುವುದನ್ನು ಗಮನಿಸಿದ ಪಾಲಕರು ಬೈದು ಬುದ್ದಿವಾದ ಹೇಳಿದ್ದರಂತೆ. ಇದಕ್ಕೆ ಕೋಪಗೊಂಡ ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗ್ತಿದೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಶ್ಮೀರದಲ್ಲಿ ರಂಜಾನ್​ ಪ್ರಾರ್ಥನೆ ನಂತರ ಪೊಲೀಸರು, ಯೋಧರ ಮೇಲೆ ಕಲ್ಲು ತೂರಾಟ

ABOUT THE AUTHOR

...view details