ವಿಜಯಪುರ: ಮಹಾರಾಷ್ಟ್ರದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣಾ ನದಿಗೆ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ಆಲಮಟ್ಟಿ ಜಲಾಶಯದ 26 ಗೇಟ್ನಲ್ಲಿ 24 ಗೇಟ್ಗಳ ಮೂಲಕ ನೀರು ಹೊರಬಿಡಲಾಗುತ್ತಿದೆ.
ಆಲಮಟ್ಟಿ ಡ್ಯಾಂನಿಂದ 1.70 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ..ಮಹಾರಾಷ್ಟ್ರದ ಗಡಿಯಲ್ಲಿ ಹೆಚ್ಚಿದ ಆತಂಕ!
ಆಲಮಟ್ಟಿ ಡ್ಯಾಂನ 24 ಗೇಟ್ನಿಂದ 1.70 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರದ ಗಡಿ ಜನತೆಯಲ್ಲಿ ಆತಂಕ ಹೆಚ್ಚಾಗಿದೆ.
ಮಹಾರಾಷ್ಟ್ರಾದ ಗಡಿಯಲ್ಲಿ ಹೆಚ್ಚಿದ ಆತಂಕ
ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಲಾಲ್ ಬಹದ್ದೂರ್ ಶಾಸ್ತ್ರೀ ಸಾಗರದ 24 ಕ್ರಸ್ಟ್ ಗೇಟ್‌ಗಳನ್ನು ಓಪನ್ ಮಾಡಲಾಗಿದ್ದು, ಯಾದಗಿರಿಯ ಬಸವ ಸಾಗರಕ್ಕೆ ನೀರು ಬಿಡಲಾಗುತ್ತಿದೆ.
ಡ್ಯಾಂಗೆ 81,202 ಕ್ಯೂಸೆಕ್ ಒಳ ಹರಿವು ಇದೆ. ಹೀಗಾಗಿ 24 ಗೇಟ್ಗಳ ಮೂಲಕ 1,71,428 ಕ್ಯೂಸೆಕ್ ನೀರು ಹೊರ ಹರಿವು ಬಿಡಲಾಗುತ್ತಿದೆ. ಇನ್ನು ಹೊರ ಹರಿವು ಹೆಚ್ಚಳದಿಂದಾಗಿ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದ ಜನತೆಯಲ್ಲಿ ಆತಂಕ ಹೆಚ್ಚಾಗಿದೆ.