ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿಂದು 103 ಜನರಿಗೆ ಕೊರೊನಾ ದೃಢ - vijayapur corona cases

ವಿಜಯಪುರದಲ್ಲಿ ಇಂದು 103 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 7,181ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಸುನೀಲ್​ ಕುಮಾರ್​ ತಿಳಿಸಿದ್ದಾರೆ.

103 positive cases confirmed in vijaypur
ವಿಜಯಪುರದಲ್ಲಿ ಇಂದು 103 ಜನರಿಗೆ ಕೊರೊನಾ ದೃಢ

By

Published : Sep 5, 2020, 8:21 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು103 ಜನರಿಗೆ ಕೊರೊನಾ ದೃಢವಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ 7,181 ಜನರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ವಿಜಯಪುರದಲ್ಲಿ ಇಂದು 103 ಜನರಿಗೆ ಕೊರೊನಾ ದೃಢ

ಇಂದು ಕೊರೊನಾದಿಂದ 75 ಜನ ಗುಣಮುಖರಾಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 6,387ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 119ಕ್ಕೆ ಏರಿಕೆಯಾಗಿದೆ.

ಜಿಲ್ಲಾಸ್ಪತ್ರೆ ಹಾಗೂ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 675 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. 304 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್​ ತಿಳಿಸಿದ್ದಾರೆ.

ABOUT THE AUTHOR

...view details