ವಿಜಯಪುರ: ಜಿಲ್ಲೆಯಲ್ಲಿ ಇಂದು 107 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5,147ಕ್ಕೆ ಏರಿಕೆಯಾಗಿದೆ.
ನಾನಾ ಕಾಯಿಲೆಗಳ ಜೊತೆಗೆ ಕೊರೊನಾ ಸೋಂಕಿನಿಂದ ಇಂದು ಸಹ ಇಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆ 62ಕ್ಕೆ ತಲುಪಿದೆ. ಮೃತರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ಇಂದು ಕೊರೊನಾದಿಂದ 19 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಇಲ್ಲಿಯವರೆಗೆ 4,182 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ.
ವಿಜಯಪುರ ಜಿಲ್ಲಾಸ್ಪತ್ರೆ, ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಸದ್ಯ 903 ಸೋಂಕಿತರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಒಟ್ಟು 44,398 ಜನರ ಮೇಲೆ ನಿಗಾ ಇಡಲಾಗಿದೆ. 62,918 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 56,782 ಜನರ ವರದಿ ನೆಗೆಟಿವ್ ಬಂದಿದ್ದು 5,147 ಜನರಿಗೆ ಪಾಸಿಟಿವ್ ವರದಿ ಬಂದಿದೆ. ಇನ್ನೂ 987 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.