ಕರ್ನಾಟಕ

karnataka

By

Published : Sep 7, 2020, 9:30 PM IST

ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 112 ಜನರಿಗೆ ಕೊರೊನಾ : 119 ಮಂದಿ ಗುಣಮುಖ

ವಿಜಯಪುರ ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Vijayapura
Vijayapura

ವಿಜಯಪುರ: ಜಿಲ್ಲೆಯಲ್ಲಿ ಇಂದು112 ಹೊಸದಾಗಿ ಪಾಸಿಟಿವ್ ದೃಢವಾಗಿದೆ.

ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,389 ಕ್ಕೆ ಏರಿಕೆಯಾಗಿದೆ.

ಇಂದು ಕೊರೊನಾದಿಂದ 119 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 6,637 ಜನರು ಗುಣಮುಖರಾದಂತಾಗಿದೆ. ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 629 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ123 ಕ್ಕೆ ಏರಿಕೆಯಾಗಿದೆ.

ಇಲ್ಲಿಯವರೆಗೆ 59, 471 ಜನರ ಮೇಲೆ ನಿಗಾ ಇಡಲಾಗಿದೆ. 80,029 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 72,529 ಜನರ ವರದಿ ನೆಗೆಟಿವ್ ಆಗಿದೆ. 7389 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 101 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ABOUT THE AUTHOR

...view details