ಕರ್ನಾಟಕ

karnataka

By

Published : Sep 15, 2020, 9:54 PM IST

ETV Bharat / state

8 ಸಾವಿರದ ಗಡಿ ದಾಟಿದ ಸೋಂಕಿತರು, ಇಂದು 131 ಪಾಸಿಟಿವ್​

ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 725 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಈವರೆಗೆ 67,525 ಜನರ ಮೇಲೆ ನಿಗಾ ಇರಿಸಲಾಗಿದೆ. 89,205 ಜನರ ಸ್ಯಾಂಪಲ್ ಪಡೆಯಲಾಗಿದೆ..

131 positive cases in vijaypur
8 ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರು

ವಿಜಯಪುರ :ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್​ಗಳ ಸಂಖ್ಯೆ 8 ಸಾವಿರ ಗಡಿದಾಟಿದೆ. ಇಂದು131 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಮಾಹಿತಿ ನೀಡಿದ್ದಾರೆ.

8 ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರು

ಈವರೆಗೆ ಜಿಲ್ಲೆಯಲ್ಲಿ 8057 ಜನರಿಗೆ ಸೋಂಕು ತಗುಲಿದೆ. ಇಂದು 87 ಜನ ಗುಣಮುಖರಾಗಿ, ಮನೆಗೆ ಮರಳಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 7194ಕ್ಕೆ ಏರಿಕೆಯಾಗಿದೆ.

ಬೇರೆ ಕಾಯಿಲೆ ಹಾಗೂ ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ138ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 725 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಈವರೆಗೆ 67,525 ಜನರ ಮೇಲೆ ನಿಗಾ ಇರಿಸಲಾಗಿದೆ. 89,205 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 80,195 ಜನರ ವರದಿ ನೆಗಟಿವ್ ಬಂದಿದೆ. 8,057 ಜನರಿಗೆ ಪಾಸಿಟಿವ್ ದೃಢಪಟ್ಟಿದ್ದು, ಇನ್ನೂ 953 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದರು.

ABOUT THE AUTHOR

...view details