ವಿಜಯಪುರ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿಯೂ ಸಹ 133 ಕಪ್ಪು ಶಿಲೀಂಧ್ರ ರೋಗದ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮಾಹಿತಿ ನೀಡಿದರು.
ವಿಜಯಪುರ ಜಿಲ್ಲೆಯಲ್ಲಿ 133 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ: ಡಿಸಿ ಮಾಹಿತಿ
ವಿಜಯಪುರ ಜಿಲ್ಲೆಯಲ್ಲಿ 133 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, 27 ಜನರು ಕಪ್ಪು ಶಿಲೀಂಧ್ರದಿಂದ ಗುಣಮುಖರಾಗಿದ್ದಾರೆ. 84 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದರು.
ಬ್ಲ್ಯಾಕ್ ಫಂಗಸ್ ಪ್ರಕರಣ
ಜಿಲ್ಲೆಯಲ್ಲಿ 133 ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ 27 ಜನ ಬ್ಲ್ಯಾಕ್ ಫಂಗಸ್ಗೆ ಚಿಕಿತ್ಸೆ ಪಡೆದು ಗುಣಮಖರಾಗಿದ್ದಾರೆ. 22 ಜನರನ್ನ ಬೇರೆ ಜಿಲ್ಲೆಯ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ. 84 ಜನರು ವಿಜಯಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 84 ಜನರಲ್ಲಿ 7 ಜನರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.