ವಿಜಯಪುರ: ಕೊರೊನಾ ಭೀತಿಯ ನಡುವೆ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಜಿಲ್ಲೆಯ 1348 ಕಾರ್ಮಿಕರು ರೈಲಿನ ಮೂಲಕ ಜಿಲ್ಲೆಗೆ ಆಗಮಿಸಿದ್ದಾರೆ.
ಇಂದು ಬೆಳಿಗ್ಗೆ 9.30ಕ್ಕೆ ನಗರದ ರೈಲು ನಿಲ್ದಾಣಕ್ಕೆ ಕಾರ್ಮಿಕರು ಆಗಮಿಸಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಿಗೆ ಕಾರ್ಮಿಕರನ್ನ ಬಸ್ ಮೂಲಕ ಕಳಿಸುವ ವ್ಯವಸ್ಥೆಯನ್ನ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾಡಿದ್ದಾರೆ.
ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಬಂದ 1348 ಕಾರ್ಮಿಕರು: ಸಾಂಸ್ಥಿಕ ಕ್ವಾರಂಟೈನ್ - ಮಹಾರಾಷ್ಟ್ರದಲ್ಲಿ ಸಿಲುಕಿದ್ದ 1348 ಜಿಲ್ಲೆಯ ಕಾರ್ಮಿಕರು
ಒಂದೇ ಸ್ಥಳದಲ್ಲಿ ಎಲ್ಲಾ ಕಾರ್ಮಿಕರ ಆರೋಗ್ಯ ತಪಾಸಣೆ ಕಷ್ಟವಾಗುತ್ತಿರುವ ಕಾರಣ ಆಯಾ ತಾಲೂಕುಗಳಲ್ಲಿ ಆರೋಗ್ಯ ತಪಾಸಣೆ ಮಾಡಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮಹಾರಾಷ್ಟ್ರದಿಂದ ವಿಜಯಪುರಕ್ಕೆ ತಲುಪಿದ 1348 ಕಾರ್ಮಿಕರು
ಅಲ್ಲದೇ ಒಂದೇ ಸ್ಥಳದಲ್ಲಿ ಎಲ್ಲಾ ಕಾರ್ಮಿಕರ ಆರೋಗ್ಯ ತಪಾಸಣೆ ಕಷ್ಟವಾಗುತ್ತಿರುವ ಕಾರಣ ಆಯಾ ತಾಲೂಕುಗಳಲ್ಲಿ ಆರೋಗ್ಯ ತಪಾಸಣೆ ಮಾಡಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಹಾಗೆಯೇ ರೈಲು ನಿಲ್ದಾಣ ಪೊಲೀಸ್ ಬಂದೋಬಸ್ತ್ನಲ್ಲಿದ್ದು, ಕಾರ್ಮಿಕರನ್ನ ಬಸ್ ಮೂಲಕ ಕಳಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಉಪಹಾರ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಗೆ ಆಗಮಿಸಿದ ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ.
TAGGED:
ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್