ಕರ್ನಾಟಕ

karnataka

ETV Bharat / state

ಜಿಲ್ಲೆಯಲ್ಲಿ ಇಂದು 138 ಪಾಸಿಟಿವ್ ಕೇಸ್​ ದೃಢ - new COVID19 cases detected

ವಿಜಯಪುರ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ..

138 new COVID19 cases detected in Vijayapura
ವಿಜಯಪುರ ಜಿಲ್ಲೆ

By

Published : Sep 29, 2020, 10:01 PM IST

ವಿಜಯಪುರ:ಜಿಲ್ಲೆಯಲ್ಲಿ ಇಂದು 138 ಹೊಸ ಪಾಸಿಟಿವ್ ಪ್ರಕರಣ ಕಾಣಿಸಿವೆ. ಈವರೆಗೆ ಜಿಲ್ಲೆಯಲ್ಲಿ 9,416 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 81 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 8,555ಕ್ಕೆ ಏರಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 163ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 698 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಈವರೆಗೆ 1,01,190 ಜನರ ಮೇಲೆ ನಿಗಾ ಇಡಲಾಗಿದೆ. 1,03,322 ಜನರ ಸ್ಯಾಂಪಲ್ ಪಡೆಯಲಾಗಿದೆ.

ಇವರಲ್ಲಿ 93,472 ಜನರ ವರದಿ ನೆಗಟಿವ್ ಆಗಿದೆ. 9,416 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. 521 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ ಸುನೀಲ್‌ಕುಮಾರ್ ತಿಳಿಸಿದ್ದಾರೆ.

ABOUT THE AUTHOR

...view details