ವಿಜಯಪುರ:ಜಿಲ್ಲೆಯಲ್ಲಿ ಇಂದು ಹೊಸದಾಗಿ 139 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಈವರೆಗೂ 6,332 ಜನರಿಗೆ ಸೋಂಕು ತಗುಲಿದೆ.
ಇಂದು ಕೊರೊನಾದಿಂದ 152 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 5,431ಕ್ಕೆ ಏರಿಕೆಯಾಗಿದೆ.

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ನಾಲ್ವರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 95ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 807 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 54,219 ಜನರ ಮೇಲೆ ನಿಗಾ ಇಡಲಾಗಿದೆ. 70,984 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 63,463 ಜನರ ವರದಿ ನೆಗಟಿವ್ ಆಗಿದೆ. 6,332 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1,188 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.