ಕರ್ನಾಟಕ

karnataka

ETV Bharat / state

ವಿಜಯಪುರ: ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ, ತಾಯಿಯಾದ 13 ವರ್ಷದ ಬಾಲಕಿ - ವಿಜಯಪುರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ ಸುದ್ದಿ

ನಿರಂತರ ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

13y-girl-gave-birth-to-baby
ತಾಯಿಯಾದ 13 ವರ್ಷದ ಬಾಲಕಿ

By

Published : Jun 2, 2020, 10:38 AM IST

ವಿಜಯಪುರ:ವ್ಯಕ್ತಿಯಿಂದ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಜಿಲ್ಲೆಯ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ತಾಯಿಯಾದ 13 ವರ್ಷದ ಬಾಲಕಿ

ಮದುವೆಯಾಗುವುದಾಗಿ ನಂಬಿಸಿ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಸಿಂದಗಿ ತಾಲೂಕಿನ ಗೊರವಗುಂಡಗಿ ಗ್ರಾಮದ ಶರಣಬಸು ಅವರಾದಿ(35) ಎಂಬುವನಿಂದ ಈ ನೀಚ ಕೃತ್ಯ ನಡೆದಿದೆ. ಅತ್ಯಾಚಾರದ ವಿಚಾರ ಯಾರಿಗೂ ಹೇಳದಂತೆ ಜೀವ ಬೆದರಿಕೆ ಸಹ ಹಾಕಿದ್ದಾನೆ. ನಿರಂತರ ಅತ್ಯಾಚಾರದ ಪರಿಣಾಮ ಗರ್ಭಿಣಿಯಾಗಿದ್ದ ಬಾಲಕಿ ಮೇ 30ರಂದು ಹೆಣ್ಣು ಮಗುವಿಗೆ ಜನ್ಮ‌ನೀಡಿದ್ದಾಳೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಬಾಲಕಿಗೆ ಹೆರಿಗೆ ಆಗಿದೆ.

ಹೆರಿಗೆ ಬಳಿಕ ಸಿಂದಗಿ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಆರೋಪಿ ಶರಣಬಸು ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ದೂರು ನೀಡಿದ್ದಾರೆ. ಆರೋಪಿ ಶರಣಬಸು ಅವರಾದಿ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕೆ ಜಾಲ‌ ಬೀಸಲಾಗಿದೆ. ಸಿಂದಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿನ್ನೆಲೆ:

ಬಸವನ‌ ಬಾಗೇವಾಡಿ ಮೂಲದ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಬೆಂಗಳೂರಿನ ಕೆಂಗೇರಿ ಬಳಿಯ ಅನಿಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದಳು. ತಾಯಿ‌ ಮನೆಯಲ್ಲಿ ಇಲ್ಲದ ವೇಳೆ ಬಾಲಕಿಯೊಂದಿಗೆ ಸಲುಗೆಯಿಂದ ವರ್ತಿಸಿದ್ದ ಆರೋಪಿ ಶರಣಬಸು ಮದುವೆಯಾಗುವುದಾಗಿ ನಂಬಿಸಿದ್ದ. ನಿರಂತರವಾಗಿ ಒಂದು ವರ್ಷದಿಂದ ಅತ್ಯಾಚಾರ ಎಸಗುತ್ತಿದ್ದ ಎಂದು ತಿಳಿದು ಬಂದಿದೆ.

ABOUT THE AUTHOR

...view details