ರಾಯಚೂರು :ಇಟಲಿಯಿಂದ ವಾಪಸ್ ಬಂದ ರಾಯಚೂರು ಮೂಲದ ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲಾಗಿದೆ. ಆದರೆ, ಆತನಲ್ಲಿ ಯಾವುದೇ ವೈರಸ್ ದೃಢಪಟ್ಟಿಲ್ಲ. ಆದರೂ ಮುಂಜಾಗೃತಾ ಕ್ರಮವಾಗಿ 14 ದಿನಗಳ ಕಾಲ ಪ್ರತ್ಯೇಕ ವಾರ್ಡ್‌ನಲ್ಲಿ ಆತನನ್ನ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್ ತಿಳಿಸಿದರು.
ರಾಯಚೂರಿನಲ್ಲಿ ವ್ಯಕ್ತಿಗೆ ಸೋಂಕಿನ ಲಕ್ಷಣ, ವೈರಸ್ ಪತ್ತೆಯಾಗಿಲ್ಲ.. 14 ದಿನ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ! - corona precaution in vijaypura
ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾಗಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಅಂತಹ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ವಿದೇಶದಿಂದ ಐವರು ವಾಪಸ್ ಬಂದಿದ್ದಾರೆ. ಅವರನ್ನು 14 ದಿನ ಕ್ವಾರೆಂಟ್ನಲ್ಲಿರಿಸಲಾಗಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಜೊತೆಗೆ ತುರ್ತು ವಾಹನವನ್ನೂ ನೇಮಿಸಲಾಗಿದೆ. 5 ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾಗಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಅಂತಹ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ಕ್ಲಬ್ಗಳಿಗೆ ಬೇರೆಡೆಯಿಂದ ಜನ ಆಗಮಿಸುತ್ತಿದ್ದಾರೆ. ಅವುಗಳನ್ನು ಸ್ಥಗಿತಗೊಳಸಬೇಕೆಂದು ಆದೇಶಿಸಲಾಗಿದೆ. ಇದರ ಜತೆಗೆ ಬೇಸಿಗೆ ಶಿಬಿರಗಳನ್ನೂ ರದ್ದುಗೊಳಿಸಲಾಗಿದೆ ಎಂದರು.